ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ.
ಕುಂದಾಪುರದಿಂದ ಹೆಂಚು ತುಂಬಿಕೊಂಡು ಸಾಗರ ಮಾರ್ಗವಾಗಿ ಸೊರಬ ಕಡೆ ಹೊರಟಿದ್ದ ಲಾರಿ ಮರಸ ಗ್ರಾಮದ ಸಮೀಪ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೊರಬ ತಾಲೂಕಿನ ಮನ್ಸೂಬ್ ಖಾನ್ (41) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮಹಾಬಲೇಶ್ವರ್ ನಾಯ್ಕ್ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ;
ಸಾಲಬಾಧೆಯಿಂದ ಮನನೊಂದು ರೈತರೊಬ್ಬರು (Farmer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಪರಮೇಶಪ್ಪ (47) ಮೃತ ರೈತ.ಕೃಷಿ ಚಟುವಟಿಕೆಗಾಗಿ ವಿವಿಧ ಬ್ಯಾಂಕುಗಳು ಮತ್ತು ಸಹಕಾರಿ ಸಂಘಗಳಿಂದ ಸಾಲ ಮಾಡಿದ್ದರು. ಬರದ ಹಿನ್ನೆಲೆ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು
ದೂರು ನೀಡಿದ್ದಾರೆ..
ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
                         
                         
                         
                         
                         
                         
                         
                         
                         
                        
