ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ
ತೀರ್ಥಹಳ್ಳಿ: ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಬ್ಬಾವು ಪ್ರತ್ಯಕ್ಷವಾಗಿದೆ.
ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಕುರುವಳ್ಳಿಯ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.
ನದಿಯಲ್ಲಿ ಹೆಬ್ಬಾವು ಇರುವ ವಿಷಯ ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಹೆಬ್ಬಾವು ರಕ್ಷಿಸಿದ್ದಾರೆ.ಹಾವನ್ನು ಆಗುಂಬೆ ಕಾಡಿಗೆ ಬಿಡುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.