ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಿಂದ ಖಾಸಗಿ ಬಸ್ನಲ್ಲಿ ಸಾಗರಕ್ಕೆ ದನದ ಮಾಂಸ ತಂದು ಮಾರಾಟ ಮಾಡುತ್ತಿದ್ದ ಸಾಗರ ಮೂಲದ ಇಮ್ತಿಯಾಜ್ ಎನ್ನುವವನನ್ನು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ದನದ ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಈಗಾಗಲೇ ಹಲವು ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಗುರುವಾರ 40 ಕೆಜಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ವಾರದ ಹಿಂದೆ ಇಮ್ತಿಯಾಜ್ ದನದ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
		 
                         
                         
                         
                         
                         
                         
                         
                         
                         
                        
