ಶಿವಮೊಗ್ಗ ನಗರದ ಸಾಗರ ರಸ್ತೆ ಎಪಿಎಂಸಿ ಮಾರ್ಕೇಟ್ ನಲ್ಲಿನ ಎನ್.ಬಿ.ಎಂ ಎಂಟರ್ ಪ್ರೈಸಸ್ ನಲ್ಲಿನ ಮಳಿಗೆಯಲ್ಲಿ ಸೆ.04 ರಂದು ಅಕ್ಕಿ ಪಾಕೇಟ್ ಗಳು ಕಳ್ಳತನವಾದ ಬಗ್ಗೆ ಮಂಜುನಾಥ ಬಿ ಎಂ, ಎಂಬುವರು ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರ ಪತ್ತೆಗಾಗಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಮತ್ತು ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ಎಂ ಡಿ. ಪ್ರಭಾರ ಪ್ರೊಬೇಷನರಿ ಐಪಿಎಸ್ ಕುಮಾರಿ ಬಿಂದುಮಣಿ ಆರ್.ಎನ್ ನೇತೃತ್ವದಲ್ಲಿ ಪಿಎಸ್ ಐ ಸುನಿಲ್ ಬಿ.ಸಿ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು, ಚಂದ್ರಾನಾಯ್ಕ್, ಮಲ್ಲಪ್ಪ ಮತ್ತು ಅರುಣಕುಮಾರ್ ರವರುಗಳನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ಸದರಿ ತನಿಖಾ ತಂಡವು ನಿನ್ನೆ ಆರೋಪಿತರಾದ 1) ಮೇಲಿನ ತುಮಗನಗರದ ಕುಮಾರ್ ಕೆ, ಮತ್ತು 2) ಅಣ್ಣನಗರದ ನಿವಾಸಿ ಜಯಣ್ಣರನ್ನ ಬಂಧಿಸಲಾಗಿದೆ. ಆರೋಪಿತರಿಂದ ಅಂದಾಜು ಮೌಲ್ಯ 1,07,800/- ರೂಗಳ ತಲಾ 26 ಕೆ.ಜಿ. ತೂಕದ 77 ಚೀಲಗಳಲ್ಲಿದ್ದ 20 ಕ್ವಿಂಟಾಲ್ ತೂಕದ ಅಕ್ಕಿ ಮತ್ತು ಅಂದಾಜು ಮೌಲ್ಯ 1,50,000/- ರೂಗಳ ಕೃತ್ಯಕ್ಕೆ ಉಪಯೋಗಿಸಿದ ಪ್ಯಾಸೆಂಜರ್ ಆಟೋವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್