ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ – ಜ್ಯೂಸ್ ಸೆಂಟರ್ ಮೇಲೆ ಪೊಲೀಸರ ದಾಳಿ
ಸಾಗರ : ಅಪ್ರಾಪ್ತ ಯುವಕರಿಗೆ ಸಿಗರೇಟ್ ಮಾರಾಟ ಮಾಡುತಿದ್ದ ನಗರದ ಬಿಎಚ್ ರಸ್ತೆಯ ನೂತನ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಮಲ್ನಾಡ್ ಜ್ಯೂಸ್ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಡಿವೈಎಸ್ಪಿ ಗಣಪತಿ ಟಿ ನಾಯಕ್ ಸಿಪಿಐ ಸೀತಾರಾಮ್. ಪಿಎಸ್ಐ ರಾಜುರ ನೇತೃತ್ವ ತಂಡ ದಿಡೀರ್ ದಾಳಿ ನಡೆಸಿ ಒಳಭಾಗದಲ್ಲಿ ಸುಮಾರು 20-25 ಜನ ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗರೇಟ್ ಸೇವನೆಗೆ ನೀಡಿದ ಜ್ಯೂಸ್ ಸೆಂಟರ್ ಮಾಲೀಕನ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಸಾಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನ ಮಕ್ಕಳು ಸಹ ಗಾಂಜಾ ಹಾಗೂ ಸಿಗರೇಟ್ ಸೇವನೆಯ ಅತಿ ಹೆಚ್ಚಾಗುತ್ತಿದ್ದು. ಜ್ಯೂಸ್ ಸೆಂಟರ್ ಹಾಗೂ ಇನ್ನಿತರ ಹೋಟೆಲ್ ಗಳಲ್ಲಿ ಸೇವನೆಗೆ ಅವಕಾಶ ನೀಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿವೈಎಸ್ಪಿ ಗಣಪತಿ ಟಿ ನಾಯ್ಕ್ ಎಚ್ಚರಿಕೆ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್