w
Headlines
Home » ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು|Farmers death

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು|Farmers death

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..??

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.

ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್​ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು. 

ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ  ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕೆಲವು ಸ್ಥಳೀಯ ಮಾದ್ಯಮಗಳಲ್ಲಿ ವರದಿಯಾಗಿತ್ತು.

ಆನಂತರ ಮೃತನ ಪುತ್ರ ಪೊಲೀಸರಿಗೆ ಹೇಳಿಕೆ ನೀಡಿದ್ದು, ಸತೀಶ್ ರವರು ಎಮ್ಮೆಯನ್ನು ಹುಡುಕಿಕೊಂಡು ಕೆರೆ  ಏರಿ ಮೇಲೆ ಹೋಗುತ್ತಿದ್ದಾಗ, ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ ತಕ್ಷಣವೇ ನೀರಿನಿಂದ ಮೇಲಕ್ಕೆತ್ತಿ ಆನಂದಪುರ  ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯ್ತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ. 

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.