w
Headlines
Home » ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ನೀರಿನಲ್ಲಿ ಮುಳುಗಿ ಸಾವು|sagar news

ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ನೀರಿನಲ್ಲಿ ಮುಳುಗಿ ಸಾವು|sagar news

ದೇವಿಗುಂಡಿಯಲ್ಲಿ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ಸಾವು

ಸಾಗರ : ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಸಾಗರ ತಾಲೂಕಿನ ವಡನ್ ಬೈಲ್ ಬಳಿಯ ದೇವಿಗುಂಡಿಯಲ್ಲಿ ಭಾನುವಾರ ನಡೆದಿದೆ. 

ಕೃಷಿ ಅಧಿಕಾರಿ ಕುಮಾರ್, ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಅರುಣ್ ಮೃತರು.

ಮೃತರು ವಡನ್ ಬೈಲ್ ಸಮೀಪದ ದೇವಿಗುಂಡಿಗೆ
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟ ಮುಗಿಸಿದ ನಂತರ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ಇಬ್ಬರ ಶವವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಕಾರ್ಗಲ್ ಸಬ್ ಇನ್ಸ್‌ಪೆಕ್ಟ‌ರ್ ಹೊಳಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.