ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!!
ಶಿವಮೊಗ್ಗ : ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮಿನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು.
ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ ಬಿ.ಎಚ್.ರಸ್ತೆಯಲ್ಲಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಸ್.ಶಿವಣ್ಣನವರ್ ವಾಹನ ತಪಾಸಣೆ ನಡೆಸಿದ್ದು, ಒಮಿನಿ ವಾಹನವನ್ನು ಪರವಾನಗಿ ಇಲ್ಲದೇ ಬಾಲಕ ಓಡಿಸಿ ನಿಯಮ ಉಲ್ಲಂಘನೆ ಮಾಡಿರುವುದು ಗೊತ್ತಾಗಿದೆ.
ಹೀಗಾಗಿ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿಕೊಂಡು ಚಾಲನೆಗೆ ಅರ್ಹತೆ ಹೊಂದಿರದ ಪುತ್ರನಿಗೆ ವಾಹನ ನೀಡಿದ್ದ ತಂದೆಯ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ವರದಿ ಸಲ್ಲಿಸಿದ್ದರು. ನ್ಯಾಯಾಧೀಶರು ದಂಡ ವಿಧಿಸಿ ಆದೇಶಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್