ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.

ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ ಕಾಮಗಾರಿಯಡಿ ಹಿಂದೆ ನಿರ್ಮಿಸಿದ್ದ ನೆಡುತೋಪಿನಲ್ಲಿದ್ದ ಅಕೇಶಿಯಾ ಮರಗಳನ್ನು ಜುಲೈ ತಿಂಗಳಿನಲ್ಲಿ ಏಕಾಏಕಿ ಕಟಾವು ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಕೆಲ ಸದಸ್ಯರು, ಗುತ್ತಿಗೆದಾರನ ಜತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ. ಸುಮಾರು 25 ಲಕ್ಷ ರೂ. ಬೆಲೆಬಾಳುವ ಮರಗಳನ್ನು 8 ಲಕ್ಷ ರೂ. ಗಳಿಗೆ ಮಾರಾಟ ಮಾಡಲು ಹುನ್ನಾರ ನಡೆಸಲಾಗಿತ್ತು. ಸುಮಾರು 6 ಲಾರಿ ಲೋಡು ಮರಗಳನ್ನು ಈಗಾಗಲೇ ಕಡಿತಲೆ ಮಾಡಿ ಸಾಗಿಸಲಾಗಿದೆ. ಆದರೆ, ಗ್ರಾಮಾಡಳಿತ ಮರ ಕಟಾವು ಕುರಿತು ಜನಾಭಿಪ್ರಾಯ ಸಂಗ್ರಹಿಸಿಲ್ಲ, ಗ್ರಾಮಸಭೆ, ಸಾಮಾನ್ಯ ಸಭೆ ನಡೆಸಿಲ್ಲ. ಯಾವುದೇ ನಡಾವಳಿ ಮಾಡಿಲ್ಲ. ಗುತ್ತಿಗೆದಾರರ ಜತೆ ಶಾಮೀಲಾಗಿ ಈ ಅಕ್ರಮ ಎಸಗಲಾಗಿದೆ ಕೂಡಲೇ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ವೀಡಿಯೋ ಇಲ್ಲಿ ವೀಕ್ಷಿಸಿ👇


ಗ್ರಾಮಾಡಳಿತದ ಒಪ್ಪಿಗೆ ಇಲ್ಲದೇ ಗುತ್ತಿಗೆದಾರ ಏಕಾಏಕಿ ಮರಗಳ ಕಡಿತಲೆ ಮಾಡಲು ಸಾಧ್ಯವಿಲ್ಲ. ಅಕ್ರಮ ಎಸಗಿದವರು ಈಗ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಗುತ್ತಿಗೆದಾರರನ್ನು ಹೊಣೆಗಾರನನ್ನಾಗಿಸಿದ್ದಾರೆ. ನಿಜವಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಮೀನಮೇಷ ಎಣಿಸುತ್ತಿರುವ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ಸಂಬಂದಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಇನ್ನೆರಡು ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ತಾಲೂಕ್ ವ್ಯಾಪ್ತಿಯಲ್ಲಿ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂಧರ್ಭದಲ್ಲಿ ಪ್ರಮುಖರಾದ ಎನ್.ವೈ.ಸುರೇಶ್, ಬಂಕೀಬೀಡು ಮಂಜುನಾಥ್, ರಾಜೇಶ್ ಹಿರಿಮನೆ, ಕೆ.ಕೆ.ರಾಮಣ್ಣ, ಗಣೇಶ್, ಗಿರೀಶ್, ದೇವರಾಜ್, ಸುಧೀಂದ್ರ, ಸತೀಶ್, ಹೂವಪ್ಪ, ದೇವೇಂದ್ರ, ಜಗದೀಶ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago