ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಮೂರು ಬೋರ್ಡ್ ಎಕ್ಸಾಂ ಮಾಡುವ ಮೂಲಕ ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಶಿಕ್ಷಕರಿಗೆ ಸ್ವಲ್ಪ ತೊಂದರೆ ಆಗಬಹುದು. ಆದರೆ ಸರ್ಕಾರ ಹೆಚ್ಚಿನ ಶಿಕ್ಷಕರ ನೇಮಕ ಮಾಡಿಕೊಳ್ಳುತ್ತದೆ. ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ನಾವು, ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಅಷ್ಟೇ ಅಲ್ಲದೆ ಮಾತೃ ಭಾಷೆಗೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಎಂಬ ವಿಚಾರವನ್ನು ಒತ್ತಿ ಹೇಳಿದ್ದಾರೆ.




ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೇಡಿಕೆಯೂ ಬಹಳ ಇದೆ. ಮಕ್ಕಳು ಮಾತೃಭಾಷೆ ಕನ್ನಡ ಕಡ್ಡಾಯ ಇರುವುದರಿಂದ ಅದರ ಜೊತೆಗೆ ಇಂಗ್ಲೀಷ್ ಹಾಗೂ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ಸೊರಬ ತಾಲ್ಲೂಕಿನಲ್ಲಿಯೂ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತೇವೆ ಎಂಬುದಾಗಿ ಹೇಳಿದ್ದಾರೆ.

ವಲಯ ಕ್ರೀಡಾಕೂಟಗಳು ಮೊದಲು ಹೆಚ್ಚಾಗಿರಲಿಲ್ಲ.‌ ಈಗ ಕ್ರೀಡಾಕೂಟಗಳ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿವೆ. ಕ್ರೀಡಾಕೂಟಗಳನ್ನು ಮಾಡುವುದರಿಂದ ಮಕ್ಕಳ ಅಭಿವೃದ್ಧಿಗೆ ಬುನಾದಿ ಹಾಕಿದಂತಾಗುತ್ತದೆ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಒತ್ತು ಕೊಡುತ್ತೇವೆ ಎಂದು ತಿಳಿಸಿದರು.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

13 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

17 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

17 hours ago

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…

1 day ago

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

1 day ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

2 days ago