ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್ ರೌಡಿಗೆ ಎದುರಾಳಿ ಗ್ಯಾಂಗ್ ಟಾರ್ಚರ್ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ನಟೋರಿಯಸ್ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್ಗೆ ಅವಾಜ್ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು.
ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಆಸ್ಪತ್ರೆಗೆ ದಾಖಲಾದ ಸ್ನೇಹಿತನನ್ನು ನೋಡಲು ಸಚಿನ್ ಷ್ಯಾಡೋ ಬರುವುದನ್ನೇ ಎದುರಾಳಿ ಗ್ಯಾಂಗ್ ಕಾದು ನಿಂತಿತ್ತು. ಅಂದುಕೊಂಡಂತೆ ಆಸ್ಪತ್ರೆಗೆ ಬಂದ ರೌಡಿ ಸಚಿನ್ ಷ್ಯಾಡೋನನ್ನು ಕಿಡ್ನ್ಯಾಪ್ ಮಾಡಿದ್ದಾರೆ.
ಬಳಿಕ ಮೂರು ದಿನ ಲಾಕ್ ಮಾಡಿಕೊಂಡ ಎದುರಾಳಿ ಗುಂಪು ಖಾಸಗಿ ಲೇಔಟ್ನಲ್ಲಿ ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಜತೆಗೆ ಹಲ್ಲೆ ಮಾಡಿರುವ ವಿಡಿಯೊ ಮಾಡಿ ವೈರಲ್ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್