ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ
ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ಹಿನ್ನಲೆ :
ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ ಬಗ್ಗೆ ಹಣ ಕಳೆದುಕೊಂಡವರು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ಬೆನ್ನತ್ತಿದ ಹೊಸನಗರ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ತಂಡ ಆರೋಪಿಯನ್ನು ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿ ಆರೋಪಿಯಿಂದ ಎರಡೂವರೆ ಲಕ್ಷ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಎಸ್ ಪಿ ಜಿ ಕೆ ಮಿಥುನ್ ಕುಮಾರ್ ,ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಎಸ್ ಭೂಮರೆಡ್ಡಿ ,ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಹೊಸನಗರ ಸಿಪಿಐ ಗುರಣ್ಣ ಡಿ ಹೆಬ್ಬಾಳ್ ನೇತ್ರತ್ವದಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ,ಸಿಬ್ಬಂದಿಗಳಾದ ಗಿರೀಶ್ ,ಪ್ರಕಾಶ್ ,ಗಂಗಪ್ಪ ಬಟೋಲಿ ,ಸುನೀಲ್, ಸಂದೀಪ್ , ಮಹೇಶ್ ಹಾಗೂ ಗಿರಿಪ್ರಸಾದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್