Headlines

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ 
ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ.

ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು.

ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *