ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಪ್ರತಿಭೆ ಅರಳಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು
ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್ ಆರ್ ಕೃಷ್ಣಮೂರ್ತಿ ಹೇಳಿದರು.
ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂಗುಡ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿರುವ ವಿಶೇಷವಾದ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಹೆದ್ದಾರಿಪುರ ಗ್ರಾಮಪಂಚಾಯತ್ ಅಧ್ಯಕ್ಷೆ ವಿನಂತಿ ರಾಘವೇಂದ್ರ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸುವುದರಿಂದ ಗ್ರಾಮೀಣ ಭಾಗದ ಮಕ್ಕಳಲ್ಲಿರುವ ನೈಜ ಪ್ರತಿಭೆಗಳು ಹೊರಬರುವುದರೊಂದಿಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಳಿ ರಮೇಶ್ ವಹಿಸಿದ್ದರು.
ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವನಿತಾ ಗಂಗಾಧರ್ ಸದಸ್ಯರಾದ ಶ್ರೇಯಸ್ ಚೂಡಾಮಣಿ, ನಾಗರತ್ನ ಶಾಮ್,ಅಕ್ಷರ ದಾಸೋಹದ ನಿರ್ದೇಶಕರಾದ ನಾಗರಾಜ,ಶಿಕ್ಷಕ ಕುಬೇರಪ್ಪ, ಸಮನ್ವಯಾಧಿಕಾರಿಗಳಾದ ರಂಗನಾಥ್, ಶಿಕ್ಷಣ ಸಂಯೋಜಕರಾದ ಕರಿಬಸಪ್ಪ.ನಿವೃತ್ತ ಬಿಇಓ ವೀರಭದ್ರಪ್ಪ ಉಪಸ್ಥಿತರಿದ್ದರು.
ಬಡ್ತಿಮುಖ್ಯ ಶಿಕ್ಷಕರಾದ ಗಣಪತಿ ಕೆ.ವಿ ಸರ್ವರನ್ನು ಸ್ವಾಗತಿಸಿದರು
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಭೋಜಪ್ಪ ಬಿ.ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಶಿಲ್ಪಾ ವಂದಿಸಿದರು.
ಈ ಮಕ್ಕಳ ಹಬ್ಬದ ಕಾರ್ಯಕ್ರಮದಲ್ಲಿ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಯ ಮಕ್ಕಳು ವಿವಿಧ ರೀತಿಯಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ನೀಡಿದರು.