ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್ ಆಗಿ ಕೇಸ್ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ ಕೇಸ್ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು. ಇವೆಲ್ಲದರ ಬೆನ್ನಲ್ಲೆ ಮತ್ತೊಂದು ಅಶ್ಲೀಲ ವಿಡಿಯೋ ಹೊರಬಿದ್ದಿದೆ.
ಲಾಡ್ಜ್ ರೀತಿಯಲ್ಲಿ ಕಾಣುವ ರೂಂನಲ್ಲಿ ನಡೆದ ಅಶ್ಲೀಲತೆಯ ವಿಡಿಯೋ ಇದಾಗಿದೆ. ದೃಶ್ಯದಲ್ಲಿ ಇರುವ ವ್ಯಕ್ತಿಯು ರಾಜಕೀಯ ಮುಖಂಡರೊಬ್ಬರ ಆಪ್ತ ವಲಯದಲ್ಲಿ ಇರುವವರು ಎಂದು ಜನರು ಮಾತನಾಡಿಕೊಳ್ತಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಹಿಂದೆ ಹಲವಾರು ಪ್ರಕರಣಗಳು ಹೊರಬಿದ್ದಿದ್ದವು. ಆನಂತರ ಆಪ್ರಾಪ್ತಯರನ್ನು ದುರ್ಬಳಕೆ ಮಾಡಿಕೊಂಡ ಆರೋಪವೊಂದು ಕೇಳಿಬಂದಿತ್ತಷ್ಟೆ ಅಲ್ಲದೆ ಕೆಲವು ವಿಡಿಯೋಗಳು ವೈರಲ್ ಆಗಿದ್ದವು. ಈ ಸಂಬಂಧ ಯುವಕನೊಬ್ಬ ಅರೆಸ್ಟ್ ಆಗಿದ್ದ. ತದನಂತರ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಬಗ್ಗೆ ದೂರು ದಾಖಲಾಗಿತ್ತು. ಮೇಲಾಗಿ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೆಲ್ಲದ ಬಳಿಕ ಹನಿಟ್ರ್ಯಾಪ್ ಟೀಂನದ್ದು ತೀರ್ಥಹಳ್ಳಿಯಲ್ಲಿ ದೊಡ್ಡಮಟ್ಟದ ಸುದ್ದಿ ಮಾಡಿತ್ತು.
ಈ ವಿಡಿಯೋ ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ ತೀರ್ಥಹಳ್ಳಿಯಲ್ಲಿ ಜೋರು ಚರ್ಚೆಗೆ ಗ್ರಾಸವಾಗಿದೆ. ಇಂತಹ ಅಸಹ್ಯಕರ ವಿಡಿಯೋಗಳು ಹಂಚಿಕೆಯಾಗುವುದು ತಾಲ್ಲೂಕಿನ ಘನತೆಗೆ ದಕ್ಕೆ ತರುತ್ತಿದೆ. ಹೀಗಾಗಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ತೀರ್ಥಹಳ್ಳಿಯಲ್ಲಿ ಕೇಳಿಬರುತ್ತಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್