ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ!
ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದರು.
ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿ ರಾತ್ರಿಯಿಡಿ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು.
ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ.