ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು,

ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ.

ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.

ಪ್ರೀತಿಸಿ ಮದುವೆಯಾದ  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು,
ಗಣೇಶ ಹಬ್ಬಕ್ಕೆಂದು ತವರು ಮನೆಗೆ ಹೋಗಿದಾಕೆಯನ್ನು ಸತೀಶ್ ರಾತ್ರೋರಾತ್ರಿ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಮಿತಾ ಮೃತಪಟ್ಟಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.




ಗಣೇಶ ಹಬ್ಬಕ್ಕೆಂದು ನಮಿತಾ ನಿನ್ನೆ (ಸೆಪ್ಟೆಂಬರ್ 18) ರಾತ್ರಿ ಶಿವಮೊಗ್ಗದ ಶಾರದಾ ನಗರದ ನಿವಾಸದಲ್ಲಿರುವ ತವರು ಮನೆಗೆ ಬಂದಿದ್ದಳು.

ಆದ್ರೆ, ಪತಿ ಸತೀಶ್ ಅಂದೇ ರಾತ್ರಿ 11. 30ಕ್ಕೆ ಹೆಂಡತಿ ನಮಿತಾಳನ್ನು ತವರು ಮನೆಯಿಂದ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದ್ರೆ, ಅದೇನಾಯ್ತೋ ಏನೋ ತಡರಾತ್ರಿ 12-15ಕ್ಕೆ ನಮಿತಾ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಪ್ರೀತಿಸಿ ಮದುವೆಯಾಗಿದ್ದ ಪತಿ ಸತೀಶ್ ಮತ್ತು ಆತನ ತಾಯಿ ಗಿರಿಜಮ್ಮ, ನಮಿತಾಳಿಗೆ ನಿರಂತರ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಹಬ್ಬದ ದಿನವೇ ಮತ್ತೆ ಪತಿ ಪತ್ನಿ ನಡುವೆ ಗಲಾಟೆಯಾಗಿದೆ. ಆ ವೇಳೆ ನಮಿತಳನ್ನು ಸತೀಶ್ ಕೊಲೆ ಮಾಡಿದ್ದಾನೆ ಎಂದು ನಮಿತಾಳ ಕುಟುಂಬಸ್ಥರು ಆರೋಪಿಸಿದ್ದಾರೆ.




ಶಿವಮೊಗ್ಗ ಗ್ರಾಮಾಂತರ ಪೊಲೀಸರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಮೃತ ನಮಿತಾಳ ಗಂಡ ಸತೀಶ್ ಹಾಗೂ ಈತನ ತಾಯಿ ಅತ್ತೆ ಗಿರಿಜಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಪ್ರೀತಿಸಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಈ ಬಗ್ಗೆ ಮೃತ ನಮಿತಾಳ ಗಂಡ ಮತ್ತು ಅತ್ತೆಯನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ನಮಿತಾಳ ಸಾವಿಗೆ ನಿಜವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

1 hour ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

1 hour ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

8 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago