ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’
ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು.

ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ ಬಳಕೆಯಿಂದಾ ಆಹಾರದ ಬೆಳೆಗಳಲ್ಲಿ ಪೌಷ್ಟಿಕಾಂಶವೇ ಇಲ್ಲದೇ ಇರುವುದರಿಂದ ನಾವು ನಿತ್ಯ ವಿಷಯುಕ್ತ ಅಹಾರ ಸೇವಿಸುವಂತಾಗಿದೆ ಆ ಕಾರಣ ಸಾವಯವಗೊಬ್ಬರ ಬೆಳೆದ ಪೌಷ್ಟಿಕಾಂಶದ ಹಣ್ಣು  ಹಸಿತರಕಾರಿ ಗೆಡ್ಡೆ ಗೆಣಸು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿನ ನುಗ್ಗೆಕಾಯಿ ಇನ್ನಿತರ ಸೋಪ್ಪು ಬಳಸುವುದರಿಂದ ಉತ್ತಮ ಆರೋಗ್ಯದಿಂದ ಇರಲು ಸಾಧ್ಯವೆಂದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ವನಿತಾಗಂಗಾಧರ್ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಾಲ ವಿಕಾಸ ಸಮಿತಿಯ ಆಧ್ಯಕ್ಷೆ ಜಯಂತಿಪ್ರದೀಪ ಅದ್ಯಕ್ಷೆತೆ ವಹಿಸಿದ್ದರು.

ಸಮಾರಂಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ವಿಶುಕುಮಾರ್, ಗುರುಗೌಡರು,ವಸಂತಮ್ಮ,ಯತೀಶ್,ಆರೋಗ್ಯ ಇಲಾಖೆಯ ರಾಘವೇಂದ್ರ,ಮುಖ್ಯೋಪಾಧ್ಯಾಯ ಉದಯಕುಮಾರ್,ಅಂಗನವಾಡಿ ಮೇಲ್ವಿಚಾರಕಿ ಚಂದ್ರಕಲಾ ಇನ್ನಿತರರು ಹಾಜರಿದ್ದರು.
ಮೂಗುಡ್ತಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗಾಯಿತ್ರಿ ಸ್ವಾಗತಿಸಿದರು.ತಳಲೆ ಅಂಗನವಾಡಿ ಕಾರ್ಯಕರ್ತೆ ಕೃಪಾ ನಿರೂಪಿಸಿದರು.

ಜಂಬಳ್ಳಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗಾಯಿತ್ರಿ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago