ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??

99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ

ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್​ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದೆ.

ಘಟನೆಯ ಹಿನ್ನಲೆ :

ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್​ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್​ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ ಬೆಳೆಸಿದ್ದಾಳೆ.

ತಾನು ಲಂಡನ್ ದೇಶದಲ್ಲಿ ನನ್ನ ಚಿಕ್ಕಪ್ಪನ ಜೊತೆ ವಾಸವಾಗಿದ್ದೇನೆ  ತಮ್ಮ ಚಿಕ್ಕಪ್ಪ  Wall Street ನಲ್ಲಿ Market Analyst ಆಗಿದ್ದಾರೆ, ಅಲ್ಲಿ ಟ್ರೇಡಿಂಗ್ ಮಾಡಿ ಲಾಭ ಗಳಿಸ್ತಿದ್ದೇನೆ ಎಂದು ವಿವರಿಸಿದ್ದಾಳೆ.

ಟ್ರೇಡಿಂಗ್ ನಲ್ಲಿ ನೀವು ದುಡ್ಡು ಮಾಡಬೇಕು ಅಂದರೆ ಲಿಂಕ್​ ಕಳಿಸ್ತೇನೆ ಜಾಯಿನ್​​ ಆಗಿ ಎಂದಿದ್ದಾಳೆ.

ಇದನ್ನು ನಂಬಿದ ಯುವಕ ಯುವತಿ ಹೇಳಿದ ಲಿಂಕ್ ಕ್ಲಿಕ್ ಮಾಡಿ ಆ್ಯಪ್ ಡೌನ್​ ಮಾಡಿ, ಪ್ರೊಸಿಜರ್ ಮುಗಿಸಿದ್ದಾನೆ. ಆನಂತರ ಆ್ಯಪ್​ನಲ್ಲಿ ಸೂಚಿಸಿದಂತೆ ವಿವಿಧ ಹಂತಗಳಲ್ಲಿ ಬರೋಬ್ಬರಿ 99,03,000/-ರೂಪಾಯಿಯನ್ನು ಇನ್​ವೆಸ್ಟ್ ಮಾಡಿದ್ದಾರೆ. ಆನಂತರ ಯುವತಿ ಹಾಗೂ ಹಾಕಿದ ಹಣ ಎರಡು ಕೂಡ ಮೋಸ ಎಂಬುದು ಗೊತ್ತಾಗಿದೆ.

ತಕ್ಷಣವೇ ಯುವಕ ಶಿವಮೊಗ್ಗದ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

16 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

16 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

17 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

17 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

22 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

23 hours ago