ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ.

ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ
ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.

ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ ಪುರಸ್ಕಾರ ಹಾಗೂ ರೋಟರಿ ಜಿಲ್ಲಾ ಗವರ್ನರ್ ರವರ ಅಧಿಕೃತ ಬೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಒಳ್ಳೆಯ ಶಿಕ್ಷಣವನ್ನು ಪಡೆದಿದ್ದರೂ ಸಹ ಉತ್ತಮ ಸಂಸ್ಕಾರದ ಅರಿವಿಲ್ಲ. ಒಳ್ಳೆಯ ಸಂಸ್ಕಾರದ ಅರಿವಿದ್ದರೆ ಮಾತ್ರ ಮಾನವನ ಜೀವನದಲ್ಲಿ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು. ರೋಟರಿ ಒಂದು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು  ಪ್ರಪಂಚದ 300ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ರೋಟರಿ ಸಂಸ್ಥೆಯ ಮೂಲ ಉದ್ದೇಶ ಸಮಾಜ ಸೇವೆಯಾಗಿದ್ದು  ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ, ಗ್ರಾಮೀಣ ಪ್ರದೇಶದಲ್ಲಿ ಒಳ್ಳೆಯ ಶಿಕ್ಷಣವನ್ನು ನೀಡುವುದರ ಜೊತೆಗೆ ಮೌಲ್ಯ ದಾರಿತ ಸಂಸ್ಕಾರದ ಅರಿವನ್ನು  ಮೂಡಿಸಬೇಕಾದದ್ದು ಪೋಷಕರ ಹಾಗೂ ಶಿಕ್ಷಕರ ಕರ್ತವ್ಯವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಶಿಕ್ಷಕರುಗಳಿಗೆ ರಾಷ್ಟ್ರ ನಿರ್ಮಾಣ ಪುರಸ್ಕಾರವನ್ನು   ನೀಡುತ್ತಿರುವುದು ಸಂತಸ ತಂದಿದೆ ಎಂದರು.

ಈ ಬಾರಿಯ ರಾಷ್ಟ್ರ ನಿರ್ಮಾಣ ಪುರಸ್ಕಾರಕ್ಕೆ  ಭಾಜನರಾದ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ. ಮಂಜುನಾಥ್, ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಿತಶಾಸ್ತ್ರದ ಉಪನ್ಯಾಸಕ ಸತೀಶ್ ಹಾಗೂ ಹೆದ್ದಾರಿ ಪುರ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಸುರೇಶಪ್ಪ ರವರನ್ನು ರೋಟರಿ ಸಂಸ್ಥೆಯ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಪ್ಪನ್ ಪೇಟೆ ರೋಟರಿ ಕ್ಲಬ್ಬಿನ ಅಧ್ಯಕ್ಷ ದೇವದಾಸ್ ಎಚ್ ಆಚಾರ್ಯ, ವಹಿಸಿದ್ದರು.

ಅತಿಥಿಗಳಾಗಿ  ರೋಟರಿ ಜಿಲ್ಲಾ 31 82ರ ಅಸಿಸ್ಟೆಂಟ್ ರವಿಕೋಟೋಜಿ, ಝೋನಲ್  ಲೆಫ್ಟಿನೆಂಟ್ ಚಂದ್ರಪ್ಪ. ಎಂ. ಬಿ.ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಹೆಚ್.ಎಂ. ಸುರೇಶ್ ಇನ್ನಿತರರಿದ್ದರು.

ರಿಪ್ಪನ್ ಪೇಟೆ ರೋಟರಿ ಕ್ಲಬ್ಬಿನ ಸಂಸ್ಥಾಪಕ ಅಧ್ಯಕ್ಷ ಎಂ. ಬಿ. ಲಕ್ಷ್ಮಣಗೌಡ, ಸ್ವಾಗತಿಸಿ.ಸಭಾಸ್ಟಿನ್ ನಿರೂಪಸಿ, ಕಾರ್ಯದರ್ಶಿ ರಾಮಚಂದ್ರ.ಎಂ. ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

11 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

18 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

1 day ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago