ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|
ರಿಪ್ಪನ್‌ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ.
ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ.
ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಹೊಸನಗರ ತಾಲೂಕಿನ ಅರಸಾಳು ಕ್ಲಸ್ಟರ್ ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ಫೌಜಿಯ ಸರವತ್ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿ ಮಲೆನಾಡಿನ ಹಿರಿಮೆಗೆ ಮತ್ತೊಂದು ಗರಿ ಮೂಡಿಸಿದ್ದಾರೆ.
ಮೂಲತಃ ಶಿವಮೊಗ್ಗ ನಗರದ ನಿವಾಸಿಯಾದ ಪ್ಯಾರೆಜಾನ್ ಹಾಗೂ ಕೌಸರ್ ಫಾತಿಮಾ ದಂಪತಿಗಳ ಪುತ್ರಿ ಫೌಜಿಯ, 2007 ರಿಂದ 2016 ರವರೆಗೂ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಮೇಲುಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ, 2016 ರಿಂದ 2022 ರ ವರೆಗೂ ತೀರ್ಥಹಳ್ಳಿ ತಾಲೂಕು ಕಲ್ಲುಗುಡ್ಡ ಪ್ರಾಥಮಿಕ ಶಾಲೆಯಲ್ಲಿ ಹಾಗೂ 2022 ರಿಂದ ಪ್ರಸ್ತುತ ಹೊಸನಗರ ತಾಲೂಕು ಮಾದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಕನ್ನಡ ಶಿಕ್ಷಕಿಯಾಗಿ ತಮ್ಮ ಯಶೋಗಾಥೆಯನ್ನು ಮುಂದುವರಿಸುತ್ತಿದ್ದಾರೆ.
2020ರಲ್ಲಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, 2021 – 22ರಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ, 2023 ರಲ್ಲಿ ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ತಮ್ಮ ಬುಟ್ಟಿಗೆ ಹಾಕಿಕೊಂಡು ಜಿಲ್ಲೆಯ, ರಾಜ್ಯ, ರಾಷ್ಟ್ರ ಮಟ್ಟದ ಇಲಾಖೆಯ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರಗಳ ಗೊಂಚಲನ್ನೆ ಪಡೆದಿದ್ದಾರೆ.
ಸಾಹಿತ್ಯ ರಚನೆಯಲ್ಲೇ ತಮ್ಮ ಪಾಂಡಿತ್ಯವನ್ನು ಪ್ರದರ್ಶಿಸಿದ ಫೌಜಿಯ ಶೈಕ್ಷಣಿಕವಾಗಿ ಇನ್ನು ಹೆಚ್ಚಿನ ಪಾಂಡಿತ್ಯ ಗಳಿಸುವ ಮಹತ್ವಕಾಂಕ್ಷೆಯ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿ ಫೌಜಿಯಾ ಸರವತ್ ರವರಿಗೆ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷೆ ರಮ್ಯಾ ಶಶಿಕುಮಾರ್ ಹಾಗೂ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್