ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ.
ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.
ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ , ಟಿಎಮ್ ಟಿ ಬಾರ್ ಗಳು,ಜೆಸಿಬಿ ,ಹಿಟಾಚಿ ,ಟಿಪ್ಪರ್ ಹಾಗೂ ಇನ್ನಿತರ ಅರ್ಥ್ ಮೂವರ್ ವಾಹನಗಳು ಒಂದೇ ಸ್ಥಳದಲ್ಲಿ ದೊರೆಯಲಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್