ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ.
ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ
ಈ ವರದಿಯನ್ನು ಗಮನಿಸಿದ ರಿಪ್ಪನ್ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ
ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದ ಶಶಿಕಲಾ ಎಂಬ ಮಹಿಳೆ ಕೆಲ ವರ್ಷಗಳ ಹಿಂದೆ ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಅವರಿಗೆ ಇರುವ ಏಕೈಕ ಮಗಳಾದ ಪೂಜಾ ಬುದ್ಧಿಮಾಂದ್ಯ ಹಾಗೂ ವಿಕಲಚೇತನಳಾಗಿದ್ದು, ತಾಯಿ ಶಶಿಕಲಾ ಅವರಿಗೂ ಕಿವಿ ಸರಿಯಾಗಿ ಕೇಳಿಸದು. ಜೋಪಡಿಯಂತಿದ್ದ ಮನೆ ಕೆಲ ವರ್ಷಗಳ ಹಿಂದೆ ಸಂಪೂರ್ಣ ಶಿಥಿಲಗೊಂಡು ಗ್ರಾಮದ ಸಮುದಾಯ ಭವನದಲ್ಲೇ ತಾಯಿ ಮಗಳು ವಾಸ ಮಾಡುತ್ತಿದ್ದಾರೆ. ಆದರೆ ಈ ಕುಟುಂಬಕ್ಕೆ ಸರ್ಕಾರದ ಯಾವ ಯೋಜನೆಗಳೂ ಸಹ ಇದುವರೆಗೆ ಸಿಕ್ಕಿಲ್ಲ.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಮೊಹಮ್ಮದ್ ಹುಸೇನ್, ಗೌರವ ಅಧ್ಯಕ್ಷ ರಮೇಶ್ ಬಿ. ಆರ್. ಹಾಗೂ ಪದಾಧಿಕಾರಿಗಳಾದ ಗಣೇಶ್ ಎ. ಆರ್., ಮಂಜುನಾಥ್ ಆಚಾರ್, ಸೀನ ಆಚಾರ್, ರಾಘು ಬಿ. ಎನ್. ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್