ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಧರ್ಮದ ಮುಖಂಡರು ಹಾಗೂ ಜನಪ್ರತಿನಿಧಿಗಳು ಹಾಗೂ ಗಣಪತಿ ಕಮಿಟಿ ಹಾಗೂ ಈದ್ ಮಿಲಾದ್ ಕಮಿಟಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ತಪ್ಪದೆ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಮಾರ್ಗಸೂಚಿಗಳನ್ನು ಪಡೆದುಕೊಳ್ಳಲು ಪೊಲೀಸ್ ಇಲಾಖೆ ಕೋರಿದೆ.