w
Headlines
Home » ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ|accident

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ|accident

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ
ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬರುವೆ ಗ್ರಾಮದ ನಿವಾಸಿ ಲೋಕೇಶ್ (48) ಗಂಭೀರ ಗಾಯಗೊಂಡಿದ್ದಾರೆ.

ಚರ್ಚ್ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಚಲಿಸುತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.ಈ ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಗಾಯಗೊಂಡು ಮಧ್ಯ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ.ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಹಾಯಕ್ಕಾಗಿ ಅಂಗಲಾಚಿದರೂ ಯಾರು ಸಹಾಯಕ್ಕೆ ಮುಂದಾಗಲಿಲ್ಲ,ನಂತರ ಸ್ಥಳೀಯರೊಬ್ಬರು ಆತನ ಸಹಾಯಕ್ಕೆ ಧಾವಿಸಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.

ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.