ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.