ರಿಪ್ಪನ್‌ಪೇಟೆ;- ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳ ದಾನಿ ಡಿ.ಸಿ ಈಶ್ವರಪ್ಪ (76) ಇಂದು ಬೆಳಗ್ಗೆ ಮನೆಯ ಬಳಿಯಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಇವರ ಪತ್ನಿ ಮೃತಪಟ್ಟಿದ್ದು ಈ ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಈಶ್ವರಪ್ಪ ಇಂದು ಬೆಳಗ್ಗೆ ಈ ರೀತಿಯ ಸಾವಿಗೆ ಶರಣಾಗಿದ್ದಾರೆ.
ಮೃತರಿಗೆ ಮೂರುಜನ ಗಂಡು ಮಕ್ಕಳು ಇದ್ದು ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ ದೊಡ್ಡಿನಕೊಪ್ಪದ ಜಮೀನಿನಲ್ಲಿ ವೀರಶೈವ ಜನಾಂಗದವರ ಸಂಪ್ರಾದಾಯದಂತೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದರು.
ಸಂತಾಪ :
ಮಂಡಲ ಮಾಜಿ ಉಪಪ್ರಧಾನ ಹಾಗೂ ಬಸವೇಶ್ವರ ವೀರಶೈವ ಸಮಾಜದ ಸ್ಥಳದಾನಿ ಡಿ.ಸಿ ಈಶ್ವರಪ್ಪನವರ ಆಕಾಲಿಕ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು,ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್,ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ,ಅರ್ ಎ ಚಾಬುಸಾಬ್ ,ಬಿ ಜಿ ನಾಗರಾಜ್ , ಎಂ.ಬಿ.ಲಕ್ಷö್ಮಣಗೌಡರು, ಅಮೀರ್ ಹಂಜಾ,ಬಸವೇಶ್ವರ ವೀರಶೈವ ಸಮಾಜದ ಉಪಾದ್ಯಕ್ಷ ಜಿ.ಎಂ.ದುಂಡರಾಜಪ್ಪಗೌಡ, ಎಂ.ಆರ್.ಶಾಂತವೀರಪ್ಪಗೌಡ,ಆಸೀಫ಼್ ಭಾಷಾ,ಏರಗಿ ಉಮೇಶ್, ಅಶ್ವಿನ್ ,ಸದಾಶಿವ ಶೆಟ್ಟಿ ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್