ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
17 82023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ 100 ಬೈಕ್ ಡಿಕ್ಕಿಯಾಗಿ ಗಂಭೀರ ಗಾಯವಾಗಿತ್ತು.
ಗಾಯಾಳು ರಿಪ್ಪನ್ ಪೇಟೆ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಗಾನ್ ಆಸ್ಪತ್ರೆಗೆ ಹೋಗಿ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ ಆಗಿರುತ್ತಾರೆ. ನಂತರ ದಿನಾಂಕ:20/08/2023 ರಂದು ತಲೆ ನೋವು ಅಂತಾ ತಿಳಿಸಿದ್ದರಿಂದ ಶಿವಮೊಗ್ಗ ಸರ್ಜಿ ಆಸ್ಪತ್ರೆಗೆ ಹೋಗಿ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಪುನಃ ಮೆಗಾನ್ ಆಸ್ಪತ್ರೆಗೆ ಸ್ಕ್ಯಾನಿಂಗ್ ರಿಪೋರ್ಟ್ ತೋರಿಸಿದಾಗ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ನೀಡಿದ ಮೇರೆಗೆ ಅದೇ ದಿನ ರಾತ್ರಿ ಖಾಸಗಿ ಅಂಬುಲೆನ್ಸ್ ನಲಿ, ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಹೋಗಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಗುಣಮುಖನಾಗದೇ 03/09/2023 ರಂದು ರಾತ್ರಿ 10-15 ಗಂಟೆಗೆ ನರಸಿಂಗ್ ರವರು ಮೃತಪಟ್ಟಿರುತ್ತಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್