ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ
ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ  ಏಕಾಏಕಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಗವಟೂರು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪೋಷಕವರ್ಗ ಪ್ರತಿಭಟನೆ ನಡೆಸಿದರು.

ಅಮಾನತ್ತು ಮಾಡಲಾದ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಇವರನ್ನು ಏಕಾಏಕಿ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ವರ್ಗಾಯಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಪೋಷಕವರ್ಗ ವಿದ್ಯಾರ್ಥಿ ವೃಂದ ಇಂದು ಶಾಲೆಯ ಮುಂಭಾಗದಲ್ಲಿ ದಿಡೀರ್ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರ ಸ್ವೀಕರಿಸದಂತೆ ತಡೆ ನೀಡಿ ನಮ್ಮೂರಿಗೆ ಈ ಮುಖ್ಯೋಪಾದ್ಯಾಯರು ಬೇಡವೇ ಬೇಡಾ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ  ಸ್ಥಳಕ್ಕೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಸಾರ್ವಜನಿಕ ಉಪನಿರ್ದೇಶಕರು ಬರುವವರೆಗೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಸ್.ಡಿ.ಎಂ.ಸಿ.ಸದಸ್ಯರುಗಳು ಗ್ರಾಮಸ್ಥರು ವಿದ್ಯಾರ್ಥಿ ಸಮೂಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಅರ್,ಕೃಷ್ಣಮೂರ್ತಿ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದರೊಂದಿಗೆ ಈ ಶಾಲೆಗೆ ಮುಖ್ಯ ಶಿಕ್ಷಕ ಗಂಗಾನಾಯ್ಕ್ ನೇಮಕಾತಿಯನ್ನು ರದ್ದುಗೊಳಿಸಿ ಅದೇಶಿಸುವ ಬಗ್ಗೆ ಭರವಸೆ ನೀಡಿದರ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರಂತರು ಪ್ರತಿಭಟನೆಯನ್ನು ಹಿಂಪಡೆದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

4 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

4 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

19 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago