Headlines

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ|arrested

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ-ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿಯ ಬಂಧನ

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಇನ್ನೊಬ ಆರೋಪಿಯಾದ ಶ್ವೇತಾ ಇನ್ನೂ ಪತ್ತೆಯಾಗಿಲ್ಲ.

ಪ್ರಶಾಂತ್ ದೇಶಪಾಂಡೆ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ 31.14 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ. ಈ‌ ಸಂಬಂದ ವಂಚನೆಗೊಳಗಾದವರು ರಿಪ್ಪನ್‌ಪೇಟೆ ,ಶಿವಮೊಗ್ಗ ಹಾಗೂ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.‌ 

ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ವಿಶೇಷ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದೆ. 

ಈ ಆರೋಪಿಯ ಮೇಲೆ ಶಿವಮೊಗ್ಗ ರಿಪ್ಪನ್ ಪೇಟೆ ಪೊಲೀಸ್ ಠಾಣೆ, ಬಾಗಲಕೋಟೆ ನವನಗರ ಠಾಣೆ ಸೇರಿ ರಾಜ್ಯದ ಅನೇಕ ಕಡೆ ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಹುಬ್ಬಳ್ಳಿ -ಧಾರಾವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *