ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ|arrested

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ
ಶಿವಮೊಗ್ಗ – ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ರೂಪಾಳಿಗೆ ಸಿಂಗೇರ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸಹಜೀವನ ನಡೆಸುತ್ತಿದ್ದರು. ಇಬ್ಬರು ಜೊತೆಯಾಗಿ ನೀಲಗಿರಿ ತೋಪಿನಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ಬೆಳಗ್ಗೆ ರೂಪಾಳ ಶವ ಸಂಕ್ಲಿಪುರದ ಅಕೇಷಿಯಾ ಪ್ಲಾಂಟೇಶನ್​ ಬಳಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಸಿಂಗೇರ್ ಎಂಬಾತನನ್ನು ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿದ್ದು ಬಯಲಾಗಿದೆ.

ಸಿಂಗೇರ್​ ಕೂಡ ಮದುವೆಯಾಗಿದ್ದು, ಈತನ ಹೆಂಡತಿಯೂ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದಳು.

ಈ ಕುರಿತು ಎಸ್ಪಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

3 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

3 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

5 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago