ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು.
ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್
ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ
ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ
ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ
ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ
ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ
ಮಾಡುತ್ತಾ ಬಂದಿದ್ದಾರೆ.ಸರ್ಕಾರದ ಮಾರ್ಗಸೂಚಿಯ
ತಿಳುವಳಿಕೆ ಹೇಳುವುದು ನಮ್ಮ ಕರ್ತವ್ಯವಾಗಿದೆ.

ಸೆಪ್ಟೆಂಬರ್18 ರಿಂದ ಗಣೇಶ ಪ್ರತಿಷ್ಟಾಪಿಸಲಾಗುತ್ತಿದ್ದು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ 76 ಗ್ರಾಮಗಳಲ್ಲಿ 126 ಕ್ಕೂ ಅಧಿಕ ಸ್ಥಳಗಳಲ್ಲಿ
ಸಂಘ ಸಂಸ್ಥೆಯವವರು ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಸಂಘ ಸಂಸ್ಥೆಯವರು ಕಛೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದಾಗಿ ಏಕಗವಾಕ್ಷಿಯಡಿ ಇಲ್ಲಿನ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಪೊಲೀಸ್ ಕಂದಾಯ ಮೆಸ್ಕಾಂ ಅಗ್ನಿಶಾಮಕ ದಳ ಹೀಗೆ ಎಲ್ಲಾ ಇಲಾಖೆಯ
ಅಧಿಕಾರಿಗಳು ಹಾಜರಿದ್ದು ಪರಿಶೀಲನೆ ನಡೆಸಿ ಗಣೇಶನ
ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತಿದೆ. ವೈಯಕ್ತಿಕ ಭಿನ್ನಾಭಿಪ್ರಾಯವನ್ನು ಮೆರೆತು ಎಲ್ಲರೂ ಶಾಂತಿ ಸುವ್ಯವಸ್ಥೆಯೊಂದಿಗೆ ಗಣೇಶೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಿ ಹಿಂದು ಮುಸ್ಲಿಂ ಬೇದಭಾವನೆ ಬೆಳಸದೇ ಶಾಂತಿ ಸೌಹಾರ್ದತೆ ಹಾಗೂ ಸಾಮರಸ್ಯದೊಂದಿಗೆ ನಾಡಹಬ್ಬವನ್ನಾಗಿ ಆಚರಿಸಿ ಎಂದು ಸಲಹೆ ನೀಡಿದರು.

ಮುಖಂಡ ಆರ್.ಎ.ಚಾಬುಸಾಬ್ ಮಾತನಾಡಿ ಗಣೇಶೋತ್ಸವ
ಮತ್ತು ಈದ್‌ಮಿಲಾದ್ ಹಬ್ಬದಲ್ಲಿ ಯಾವುದೇ ಬೇದಭಾವನೆ ಮಾಡದೇಎಲ್ಲರೂ ಕೂಡಿ ಮಾಡುವುದರಿಂದ ಶಾಂತಿ ನೆಮ್ಮದಿಯಿಂದಿರಲು ಸಹಕಾರಿಯಾಗಿದೆ ಇದೊಂದು ಮಾದರಿ ಗ್ರಾಮೀಣ ಪ್ರದೇಶದ ನಾಡಹಬ್ಬವಾಗಿದೆ ಎಂದು ಹೇಳಿ ಗಣಪತಿ ವಿಸರ್ಜನೆಯ ಮೂರು ನಾಲ್ಕು ದಿನ ಮಧ್ಯ ಮಾರಾಟವನ್ನು ಸಂಪೂರ್ಣ ನಿಷೇದಿಸುವುದು ಮತ್ತುಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿ ರಾಜ್ಯ ಹೆದ್ದಾರಿ ಹಾದುಹೋಗುವ ಸಾಗರ ತೀರ್ಥಹಳ್ಳಿ ಶಿವಮೊಗ್ಗ ಹೊಸನಗರ ಮುಖ್ಯರಸ್ತೆಯ ಒಂದು ಕಿ.ಮೀ.ದೂರದಲ್ಲಿ ಹಂಪ್ ಅಳವಡಿಸುವುದರೊಂದಿಗೆ ವಾಹನಗಳ ವೇಗವನ್ನು ನಿಯಂತ್ರಿಸುವಂತೆ ಮನವಿ ಮಾಡಿದರು.

ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾ ಸಮಿತಿಯ
ಪದಾಧಿಕಾರಿಗಳಾದ ಎಂ.ಬಿ.ಮಂಜುನಾಥ್,ಎಂ.ಸುರೇಶ್‌ಸಿಂಗ್ ಮಾತನಾಡಿ ರಿಪ್ಪನ್‌ಪೇಟೆಯಲ್ಲಿ ಗಣಪತಿ ಹಬ್ಬವನ್ನು ಎಲ್ಲಾ ಧರ್ಮದವರು ನಾಡಹಬ್ಬದಂತೆ ಆಚರಿಸುತಿದ್ದು ಈ ಬಾರಿಯೂ ಗಣೇಶೋತ್ಸವವನ್ನು ಎಲ್ಲಾರೂ ಸೇರಿ ಅದ್ದೂರಿಯಾಗಿ ನಡೆಸಲಿದ್ದೇವೆ, ಕಳೆದ ವರ್ಷದ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಪೊಲೀಸ್
ಇಲಾಖೆಯ ಅಧಿಕಾರಿಯೋರ್ವರು ನಮ್ಮ ಸಂಸ್ಥೆಯ ಸ್ವಯಂ
ಸೇವಕರನ್ನು ಎಳೆದಾಡಿದರು ಈ ಬಾರಿ ಅದು ಮರುಕಳಿಸದಂತೆ ಗಮನಹರಿಸುವಂತೆ ಮನವಿ ಮಾಡಿದರು.

ಹಿಂದುಗಳ ಗಣೇಶೋತ್ಸವ ಮತ್ತು ಮುಸ್ಲಿಂ ಜನಾಂಗದ
ಈದ್‌ಮಿಲಾದ್ ಹಬ್ಬ ಒಂದೇ ದಿನ ಬಂದಿದ್ದು ಹೇಗೆ ಎಂಬ ಚಿಂತೆ
ಕಾಡುವಂತಾಗಿದ್ದು ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿಯವ
ಮುಸ್ಲಿಂ ಮುಖಂಡರು ನಮ್ಮೂರಿನ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಮಾಡುವಾಗ ನಾವುಗಳು ಹಿಂದೂ ಧಾರ್ಮಿಕತೆಗೆ ದಕ್ಕೆ ತರಬಾರದೆಂಬ ಉದ್ದೇಶದೊಂದಿಗೆ ನಮ್ಮ ಈದ್‌ಮಿಲಾದ್ ಹಬ್ಬವನ್ನು ಮುಂದೂಡಲಾಗಿದ್ದು ಮುಂದಿನ ತಿಂಗಳು 10 ರಿಂದ 14 ರವರೆಗೆ ಆಚರಿಸಲು ಮಸೀದಿ ಸಮಿತಿಯವರು ತಿರ್ಮಾನಿಸಿರುವುದಾಗಿ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಆಸೀಫ಼್ ಭಾಷಾ ಘೋಷಿಸಿದರು.ಈ ಸಂಧರ್ಭದಲ್ಲಿ ನೆರೆದಿದ್ದವರೆಲ್ಲಾ ಚಪ್ಪಾಳೆ ತಟ್ಟುವ ಮೂಲಕ ಹರ್ಷ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿö್ಮ,ಉಪಾಧ್ಯಕ್ಷ
ಸುದೀಂದ್ರಪೂಜಾರಿ,ಸಾರ್ವಜನಿಕರ ಪರವಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಆರ್.ಎನ್.ಮಂಜುನಾಥ ,ಸಾಮಾಜಿಕಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ, ಮಾತನಾಡಿ ಸಲಹೆ ನೀಡಿದರು.

ಶಾಂತಿ ಸಮಿತಿ ಸಭೆಯಲ್ಲಿ ತಹಶೀಲ್ದಾರ್ ರಾಕೇಶ್,ಪಿ.ಡಬ್ಲಡಿ ಎಇಇ
ಮಲ್ಲಿಕಾರ್ಜುನ,ಉಪತಹಶೀಲ್ದಾರ್ ಹುಚ್ಚರಾಯಪ್ಪ, ವೃತ್ತ ನಿರೀಕ್ಷಕ
ಗುರಣ್‌ಹೆಬ್ಬಾಳ್,ಹೊಸನಗರ ಪಿಎಸ್‌ಐ ಶಿವಾನಂದಕೋಳಿ,ನಗರ ಪಿಎಸ್‌ಐ ಹಾಗೂ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ.ಭಾಗವಹಿಸಿ ಮಾತನಾಡಿದರು.ಪೊಲೀಸ್ ಪೇದೆ ಅಶ್ವಿನಿ ಅಥಣಿ ನಿರೂಪಿಸಿ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

38 minutes ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

2 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago