ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!
ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು..
ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ ಮರಣಕ್ಕೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಾಥಮಿಕ ಶಿಕ್ಷಣವನ್ನ ಶಿಕಾರಿಪುರ ನಲ್ಲಿನಕೊಪ್ಪದಲ್ಲಿ ಪೂರ್ಣ ಗೊಳಿಸಿದ್ದು
ಪ್ರೌಢ ಶಾಲೆ ವಿದ್ಯಾಭ್ಯಾಸವನ್ನ ಹೊಸೂರು ಶಿಕಾರಿಪುರದಲ್ಲಿ ಮುಗಿಸಿದ್ದು ಪದವಿಯನ್ನ ದೂರ ಶಿಕ್ಷಣ ಮೂಲಕ ಹಾಗೂ ಪದವಿ ಪೂರ್ವ ಶಿಕ್ಷಣವನ್ನ ಶಿಕಾರಪುರ ಸಿಟಿಯ ಜೂನಿಯರ್ ಕಾಲೇಜು ನಲ್ಲಿ ಪೂರ್ಣ ಗೊಳಿಸಿದ್ದಾರೆ..
ಹಠತ್ ಇವರಿಗೆ ಕ್ಯಾನ್ಸರ್ ಮಹಾಮಾರಿ ಇವರನ್ನ ಅವರಿಸಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ..
2017 ರ ಬ್ಯಾಚ್ ನ ಪಿಎಸ್ಐ ಆಗಿ ಕರ್ನಾಟಕ ಪೊಲೀಸ್ ಇಲಾಖೆಗೆ ಸೇರಿದ ಜಗದೀಶ್ ನಾಯ್ಕ 2009 ಪೊಲೀಸ್ ಪೇದೆಯಾಗಿ ಮಂಗಳೂರು ನಗರ 2015 ರಲ್ಲಿ RSI ಆಗಿ ಬೆಂಗಳೂರು ನಗರ,2018 ಪಿಎಸ್ಐ ಸಿವಿಲ್ ಆಗಿ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದರು..
ಕಳೆದ 2ವರ್ಷದ ಹಿಂದೆ ಶಿವಮೊಗ್ಗದ ಹೊಸಕೊಪ್ಪ ಸಮೀಪದ ಯುವತಿಯನ್ನ ಮದುವೆ ಸಹ ಆಗಿದ್ದರು..
ಜಗದೀಶ್ ನಾಯ್ಕ ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸ್ವ ಗ್ರಾಮ ನಲ್ಲಿನಕೊಪ್ಪ ದಲ್ಲಿ,ಸಕಲ ಸರ್ಕಾರಿ ಗೌರವ ಗಳೊಂದಿಗೆ ನೆರವೇರಲಿದ್ದು ಇಡೀ ಶಿವಮೊಗ್ಗ ಪೊಲೀಸ್ ಇಲಾಖೆ ಸ್ನೇಹಿತರು, ಕುತುಂಬಸ್ತರು ಜಗದೀಶ್ ನಾಯಕರ ಅಕಾಲಿಕ ಮರಣಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ..
ಮಾಹಿತಿ :ಅಜಿತ್ ಗೌಡ ಬಡೇನಕೊಪ್ಪ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್