ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು.
ಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ ವರ್ಷದ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ಇತ್ತು. ಹೀಗಾಗಿ ಭಾನುವಾರ ಮುಂಜಾನೆ ತಾಳಿ ಕಟ್ಟಿಸಿಕೊಂಡ ಸತ್ಯವತಿಯನ್ನು ವರ ಫ್ರಾನ್ಸಿಸ್ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋದರು.
ಪರೀಕ್ಷೆ ನಂತರ ನವವಧು ಮತ್ತೆ ಮದುವೆ ಮಂಟಪಕ್ಕೆ ತೆರಳಿ ಮುಂದಿನ ಧಾರ್ಮಿಕ ವಿಧಿವಿಧಾನದಲ್ಲಿ ಭಾಗಿಯಾದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್