ತೀರ್ಥಹಳ್ಳಿ: ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ.
ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ.
ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು ಅದರಲ್ಲಿ.ಯಾರಿದ್ದರು ಎಂಬಿತ್ಯಾದಿ ಮಾಹಿತಿ ಇನ್ನೂ ಕೂಡ ಸ್ಪಷ್ಟವಾಗಿಲ್ಲ.
ಕಾರಿನ ನೋಂದಣಿ ಸಂಖ್ಯೆ ಕೂಡ ಕಾಣದಿರುವಷ್ಟರ ಮಟ್ಟಿಗೆ ಕಾರು ಸುಟ್ಟು ಹೋಗಿದೆ.