Headlines

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ..??HMS

ರಿಪ್ಪನ್‌ಪೇಟೆ(Ripponpet) : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 56ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಗುರುವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಗುರುವಾರ ಸಂಜೆ ಮೆರವಣಿಗೆ ಹೊರಟು…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ : ಕಾರಿನೊಳಗೆ ಸಿಲುಕಿಕೊಂಡ ಚಾಲಕ|accident

ಖಾಸಗಿ ಬಸ್ – ಕಾರಿನ ನಡುವೆ ಅಪಘಾತ  ಶಿವಮೊಗ್ಗ : ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಬಸ್ ಮುಂಭಾಗ ಹಾಗೂ ಕಾರು ನುಜ್ಜುಗುಜ್ಜಾಗಿದೆ. ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ತೀರ್ಥಹಳ್ಳಿ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕಾರು ಚಾಲಕ ಕಾರಿನಿಂದ ಹೊರಬರಲು ಸಾಧ್ಯವಾಗದೇ ಸಿಲುಕಿಕೊಂಡಿದ್ದರು. ಈ ಸಂಧರ್ಭದಲ್ಲಿ ಸ್ಥಳೀಯರ ಸಹಕಾರದಿಂದ ಕಾರು ಚಾಲಕನನ್ನು ಹೊರ ತೆಗೆಯಲಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…

Read More

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು|fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ:  ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More