w
Headlines
Home » ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು
ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ.


ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ.

ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.