ರಿಪ್ಪನ್‌ಪೇಟೆ : ಅಕ್ರಮ ಮರಳು ಮತ್ತು ಕಲ್ಲು ಸಾಗಾಟ – ಎರಡು ಟಿಪ್ಪರ್ ಲಾರಿ ವಶ
ರಿಪ್ಪನ್‌ಪೇಟೆ : ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ನೇತೃತ್ವದ ಸಿಬ್ಬಂದಿಗಳ ತಂಡ ಗಸ್ತು ತಿರುಗುತ್ತಿರುವಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಟಿಪ್ಪರ್ ಲಾರಿ ಹಾಗೂ ಅಕ್ರಮವಾಗಿ ಕಲ್ಲು ಸಾಗಿಸುತಿದ್ದ ಮಿನಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.