ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 
ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. 
ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೋಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಘಟನೆ ಇಡೀ ಗ್ರಾಮವನ್ನೇ ಕಂಗೆಡಿಸಿದೆ. 
ಘಟನೆಯ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯಬೇಕಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
		 
                         
                         
                         
                         
                         
                         
                         
                         
                         
                        
