ರಿಪ್ಪನ್‌ಪೇಟೆ – ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ|dengue

ರಿಪ್ಪನ್‌ಪೇಟೆ : ಡೆಂಗ್ಯೂ ಜ್ವರದಿಂದ ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಶಬರೀಶನಗರದಲ್ಲಿ ನಡೆದಿದೆ.

ಮಧುರ (31) ಮೃತಪಟ್ಟ ಮಹಿಳೆ,ಕಳೆದ ಆರು ತಿಂಗಳ ಹಿಂದೆ ಶಬರೀಶನಗರದ ಮಂಜುನಾಥ್ ಎಂಬುವವರೊಂದಿಗೆ ವಿವಾಹವಾಗಿತ್ತು.

ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದ ಹಿನ್ನಲೆಯಲ್ಲಿ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ನಿನ್ನೆ ಬೆಳಿಗ್ಗೆ ಡಿಸ್ಚಾರ್ಜ್ ಆಗಿ ತಾಯಿ ಮನೆಯಾದ ತಾಳಗುಪ್ಪಕ್ಕೆ ತೆರಳಿದ್ದಾರೆ

ರಾತ್ರಿ ಸಮಯದಲ್ಲಿ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಾಗರ ಆಸ್ಪತ್ರೆಗೆ ಕರೆತರಲಾಗಿತ್ತು ಆದರೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಬೆಳಗ್ಗೆ 5 ಗಂಟೆಗೆ ಸಾಗರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇಂದು ರಿಪ್ಪನ್‌ಪೇಟೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *