ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ.
ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಗಣಿಮತ್ತು ಭೂ ವಿಜ್ಞಾನಕ್ಕೆ ಪತ್ರ ಬರೆದಿದ್ದಾರೆ. ಈಗ ಮರಳು ಮತ್ತು ಮರಳಿನ ರಾಯಲ್ಟಿಯನ್ನ ಕೊಡುವುದನ್ನ ನಿಲ್ಲಿಸಿದ್ದರಿಂದ ಈ ಪ್ರಕರಣ ಪ್ರಾಮುಖ್ಯತೆ ಪಡೆದಿದೆ.
ಮರಳು ತುಂಬಿದ ಟ್ರ್ಯಾಕ್ಟರ್ ನ್ನ ವಿನೋಬ ನಗರ ಪೊಲೀಸರು ವಶಕ್ಕೆ ಪಡೆದುಕೊಂಡು ಠಾಣೆಯ ಮುಂದೆ ನಿಲ್ಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನದಿಂದ ಬಂದ ವರದಿಯ ಆಧಾರದ ಮೇಲೆ ಕ್ರಮ ಜರುಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್