ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು ಆಯುಧ ಪೂಜೆ ನಡೆಸಲಾಯಿತು.
ಉಪಠಾಣೆಯಿಂದ ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಆನಂದಪುರ ಠಾಣೆಯ ನಿರ್ಮಲ ಪಿಎಸ್ಐ, ಹರೀಶ್ ಎಎಸ್ಐ. ವೆಂಕಟೇಶ್ ಎಎಸ್ಐ, ಸುರೇಶ್ ಎ ಎಸ್ ಐ. ದೇವಿದಾಸ ನಾಯ್ಕ ,ಕಾಂತೇಶ್ ವಗ್ಗಿ , ಪರಶುರಾಮ್, ಮಹಮ್ಮದ್ ತಾಹಿರ್ ಚಂದ್ರಶೇಖರ ಗೌಡ. ನರೇಂದ್ರ .ಸತೀಶ್. ಕುಬೇರ ಎಲ್. ಶ್ರೀಕಾಂತ್ .ಅವಿನಾಶ್ .ಮಾಲತೇಶ್ . ಶರಣಪ್ಪ .ಪ್ರಶಾಂತ್ . ಸೋಮಶೇಖರ್. ಶಶಿಕಲಾ .ಜಯಶೀಲ. ನಿರಂಜನ. ಅಭಿಷೇಕ್ .ರಘು .ಹರ್ಷ .ಸಂತೋಷ್. ಸಂತೋಷ್ ಕುಮಾರ್ .ಸುಬ್ರಹ್ಮಣ್ಯ. ಸುನಿಲ್, ಮಾಳಿಂಗರಾಯ ಪಾಲ್ಗೊಂಡಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್