Headlines

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಪ್ರದೇಶವಾದ ದೋಬೈಲು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯ ಈ ಸಾಧನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಅದ್ವಿತೀಯ ಸಾಧನೆಗೈದ ಜೀವಿತಾ ರವರಿಗೆ ಹೊಸನಗರ ಕ್ಷೇತ್ರದ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ,ಎಸ್ ಡಿಎಂಸಿ ಅಧ್ಯಕ್ಷ ಶಿವಪ್ಪ ,ಮುಖ್ಯೋಪಾಧ್ಯಾಯ ಸಂದೀಪ್ ,ಅತಿಥಿ ದೈಹಿಕ ಶಿಕ್ಷಕ ಕಿರಣ್ ,ಎಸ್ ಡಿ ಎಂಸಿ ಸದಸ್ಯರು, ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version