ರಿಪ್ಪನ್‌ಪೇಟೆ : ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಸಮೀಪದ ಶಿವಪುರದಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪಟ್ಟಣದ ಸಮೀಪದ ಕೋಟೆತಾರಿಗ ಉಮೇಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಕ್ಟೋಬರ್ 6 ರಂದು ಬೀರೂರು ಸಮೀಪದ ಶಿವಪುರದ ಬಳಿ ಪೆಟ್ರೋಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರು ಚಲಾಯಿಸುತಿದ್ದ ಬಿರೂರು ಗ್ರಾಮದ ಆರ್ ಸುರೇಶ್ (65) ಸ್ಥಳದಲ್ಲಿಯೇ ಮೃತಪಟ್ಟು ಟ್ಯಾಂಕರ್ ಚಾಲಕ ರಿಪ್ಪನ್‌ಪೇಟೆ ಸಮೀಪದ ಕೋಟೆತಾರಿಗ ನಿವಾಸಿ ಉಮೇಶ್ ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ಉಮೇಶ್ ರವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಉಮೇಶ್ ಮೃತಪಟ್ಟಿದ್ದಾರೆ.
ಘಟನೆಯ ಹಿನ್ನಲೆ
ಬಿರೂರು ಪಟ್ಟಣದ ಕನ್ನಡ ಸಂಘದ ಮಾಜಿ ಅಧ್ಯಕ್ಷ ಮತ್ತು ಅಡಿಕೆ ಬೆಳೆಗಾರರ ಸಂಘದ ಸದಸ್ಯ ಅರೆಕಲ್ ಆರ್.ಸುರೇಶ್ (65)
ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಂಬಂಧಿಯೊಬ್ಬರ ಆರೋಗ್ಯ ವಿಚಾರಿಸಲು ತೆರಳುವಾಗ ಶಿವಪುರದ ಬಳಿ ಎದುರಿನಿಂದ ಬಂದ ಪೆಟ್ರೋಲ್ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದರು
ಸಹ ಪ್ರಯಾಣಿಕರಾದ ಮಂಜುನಾಥ್ ಮತ್ತು ಮುರಳಿ ಗಾಯಗೊಂಡಿದ್ದು ಇಬ್ಬರನ್ನೂ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಂಕರ್ ಚಾಲಕ ರಿಪ್ಪನ್‌ಪೇಟೆ ಮೂಲದ ಉಮೇಶ್ ರವರಿಗೆ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು