ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.

ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಗಣಪತಿ ಗವಟೂರುರವರಿಗೆ ಪದವಿ ಪ್ರಧಾನ ಮಾಡಿ ಮಾತನಾಡಿದ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು ರಾಜ್ಯದ ಜನತೆಯ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತದೆ. ಚುನಾವಣಾ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರೆಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಜನತೆಗೆ ಹಾಗೂ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಈಗಾಗಲೇ  ಅದರ ಫಲಾನುಭವಿಗಳು ಆ ಗ್ಯಾರೆಂಟಿಗಳ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇನ್ನುಳಿದ ಯುವಶಕ್ತಿ ಪದವಿದರರಿಗೆ ಇರುವ ಒಂದು ಗ್ಯಾರಂಟಿಯನ್ನು ಇನ್ನು ಕೆಲವೇ ದಿನಗಳಲ್ಲಿ  ಜಾರಿಗೆ ಬರಲಿದ್ದು  ಈಗಾಗಲೇ ರಾಜ್ಯ ಸರ್ಕಾರ ಆ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದರು.

ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಂದ ಹಿಡಿದು ರಾಜ್ಯಮಟ್ಟದ ನಾಯಕರುಗಳ ವರೆಗೂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂದು  ಹಗಲಿರಳು ಶ್ರಮಿಸಿದರ ಫಲವಾಗಿ   ಇಂದು ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ವಿಧಾನಪರಿಷತ್ತಿಗಾಗಿ ನಡೆಯುವ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರವಾಗಿ  ಕಾರ್ಯಕರ್ತರು ಹಾಗೂ ಮುಖಂಡರುಗಳು  ಶ್ರಮಿಸಬೇಕು. ಕಾರ್ಯಕರ್ತರುಗಳು ಹಾಗೂ ಮುಂಚೂಣಿಯಲ್ಲಿರುವ ಮುಖಂಡರುಗಳು ತಾವೆಲ್ಲರೂ ಒಂದೇ ಎನ್ನುವ ಮನೋಭಾವನೆಯನ್ನು ಹೊಂದಿದಾಗ ಮಾತ್ರ ಪಕ್ಷದ ಅಭ್ಯರ್ಥಿಯ ಗೆಲುವು ಮತ್ತು ಸಂಘಟನೆಗೆ ಕಾರಣವಾಗುತ್ತದೆ.ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂದು ಈ ಸಂದರ್ಭದಲ್ಲಿ ಹೇಳಿದರು.

ಕೇಂದ್ರದಲ್ಲಿರುವ ಬಿಜೆಪಿ ಸರಕಾರವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ  ವಿರೋಧ ಪಕ್ಷದ ನಾಯಕರುಗಳಿಗೆ ಮತ್ತು ಮುಖಂಡರುಗಳಿಗೆ ಹೆಣೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಆ ಪಕ್ಷದ ಕೀಳು ಮಟ್ಟದ ರಾಜಕೀಯ ವರ್ತನೆಯನ್ನು ತೋರಿಸುತ್ತದೆ ಎಂದು ಹೇಳಿದರು.
ರಾಷ್ಟ್ರದ ಹಾಗೂ ರಾಜ್ಯದ ಜನತೆ ಬಿಜೆಪಿಯ ಪೊಳ್ಳು ಬರವಸೆಯಿಂದ ಬೇಸತ್ತು ಈ ಬಾರಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಬೆಂಬಲಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್ ವಹಿಸಿದ್ದರು.

ರಿಪ್ಪನ್‌ಪೇಟೆ ಘಟಕದ ನೂತನ ಅಧ್ಯಕ್ಷರಾಗಿ ಪದವಿ ಸ್ವೀಕರಿಸಿದ ಗವಟೂರು ಗಣಪತಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯ ಬಿಪಿ ರಾಮಚಂದ್ರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್, ಗ್ರಾಮ ಪಂಚಾಯಿತಿ ಸದಸ್ಯರಾದ ಡಿ. ಇ ಮಧುಸೂದನ್, ಆಶಿಫ್ ಭಾಷಾ ಸಾಬ್, ಪ್ರಕಾಶ್ ಪಾಲೇಕರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ, ಅಮೀರ್ ಹಂಜಾ ಎಂ ಎಂ ಪರಮೇಶ್, ಎಪಿಎಂಸಿ ಅಧ್ಯಕ್ಷ ಈಶ್ವರಪ್ಪ ಗೌಡ, ಜಿ.ಆರ್. ಗೋಪಾಲಕೃಷ್ಣ  ಕೆರೆಹಳ್ಳಿ ರವಿ,ಬಿಎಸ್ಎನ್ಎಲ್ ಶ್ರೀಧರ್, ಉಮೇಶ್ ಗೌಡ. ಕೆರೆಹಳ್ಳಿ ನರಸಿಂಹ, ಮಳವಳ್ಳಿ ಮಂಜು,ಸೇರಿದಂತೆ ಇನ್ನಿತರರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

5 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

8 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

9 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

9 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

16 hours ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

18 hours ago