Headlines

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ.

ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ.

ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ ದಿನ ರಾತ್ರಿ ಗಾಳಿಬೈಲ್ ಗ್ರಾಮದ ತೋಟದಲ್ಲಿ ಸೇರಿಕೊಂಡಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *