ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಮಗುವಿನೊಂದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರಾದರು.
ಮೃತ ವ್ಯಕ್ತಿ ಕುಮಾರ್ ಆರ್ (62) ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿಯವನಾದ ಈತ ಕಳೆದೊಂದು ವರ್ಷದಿಂದ ಚಿಕ್ಕಜೇನಿ ತಮ್ಮ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ಕಳೆದ ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಕೋಡೂರು ಗ್ರಾಮ ಪಂಚಾಯತಿಯ ಶಾಂತಪುರದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಖಾಸಗಿ ಬಸ್‌ಗೆ ಕೀಳಂಬಿ ಬಸ್ ನಿಲ್ದಾಣದಲ್ಲಿ ಮಗು (ಮೊಮ್ಮಗ) ವಿನೊಂದಿಗೆ ಬಸ್ ಏರಿದ್ದ ಈತ ಕೇವಲ 200 ಮೀ. ದೂರ ಸಾಗುವಷ್ಟರಲ್ಲಿ ಬಸ್‌ನಿಂದ ಕೆಳಗೆ ಬಿದಿದ್ದರು. ಈ ವೇಳೆ ತಲೆ, ಕೈ, ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.
ಬಸ್‌ನಲ್ಲಿ ಅಧಿಕ ಜನ ತುಂಬಿದ್ದು ತಿರುವಿನಲ್ಲಿ ಚಾಲಕ ಅಜಾಗರೂಕತೆಯಿಂದ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿತ್ತು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್