Headlines

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು|accident

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಮಗುವಿನೊಂದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರಾದರು.

ಮೃತ ವ್ಯಕ್ತಿ ಕುಮಾರ್ ಆರ್ (62) ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿಯವನಾದ ಈತ ಕಳೆದೊಂದು ವರ್ಷದಿಂದ ಚಿಕ್ಕಜೇನಿ ತಮ್ಮ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಕಳೆದ ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಕೋಡೂರು ಗ್ರಾಮ ಪಂಚಾಯತಿಯ ಶಾಂತಪುರದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಖಾಸಗಿ ಬಸ್‌ಗೆ ಕೀಳಂಬಿ ಬಸ್ ನಿಲ್ದಾಣದಲ್ಲಿ ಮಗು (ಮೊಮ್ಮಗ) ವಿನೊಂದಿಗೆ ಬಸ್ ಏರಿದ್ದ ಈತ ಕೇವಲ 200 ಮೀ. ದೂರ ಸಾಗುವಷ್ಟರಲ್ಲಿ ಬಸ್‌ನಿಂದ ಕೆಳಗೆ ಬಿದಿದ್ದರು. ಈ ವೇಳೆ ತಲೆ, ಕೈ, ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.

ಬಸ್‌ನಲ್ಲಿ ಅಧಿಕ ಜನ‌ ತುಂಬಿದ್ದು ತಿರುವಿನಲ್ಲಿ ಚಾಲಕ ಅಜಾಗರೂಕತೆಯಿಂದ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿತ್ತು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Exit mobile version