ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. 
ನಡೆದಿದ್ದೇನು..??
ಖಾಸಗಿ ಬಸ್ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್ ಟರ್ನಿಂಗ್ನಲ್ಲಿ ಬಸ್ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ.
ಬಸ್ ಪಲ್ಟಿಯಾಗಿರುವುದನ್ನ ಗಮನಿಸಿದ ಸ್ಥಳಿಯರು ತಕ್ಷಣವೇ ಸ್ಥಳಕ್ಕೆ ಹೋಗಿ  ಬಸ್ನಲ್ಲಿದ್ದವರನ್ನ ಹೊರಕ್ಕೆ ಕರೆತಂದು ಆರೈಕೆ ಮಾಡಿದ್ದಾರೆ.
 ಇನ್ನೂ ಘಟನೆ ವೇಳೆ ಬಸ್ನಲ್ಲಿ 20 ಜನರು ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ ಒಂಬತ್ತು ಮಂದಿಗೆ ಗಾಯಗಳಾಗಿದ್ದು ಅವರನ್ನು ಸಾಗರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. 
 ಆನಂದಪುರ ಪೊಲೀಸ್ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ
		 
                         
                         
                         
                         
                         
                         
                         
                         
                         
                        
