ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್

ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ (NIA) ನೋಟಿಸ್ ಜಾರಿ ಮಾಡಿದೆ.

ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​​ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ‌ ಎನ್​ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚನೆ ನೀಡಲಾಗಿದೆ.

2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್‌ಐಎ, ಇಬ್ಬರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಮಾಜ್ ಮುನೀರ್ ಅಹಮದ್ ಹಾಗೂ ಸೈಯದ್ ಯಾಸೀನ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಐಪಿಸಿ 120ಬಿ, 121ಎ ಮತ್ತು 122, 1860, ಯುಎಪಿಎ ಕಾಯ್ದೆ 18, 18ಬಿ, 20 ಮತ್ತು 38 ರ ಅಡಿಯಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಐಸಿಸ್ ಚಟುವಟಿಕೆಗಳನ್ನ ರಾಜ್ಯದಲ್ಲಿ ವಿಸ್ತರಿಸಲು ಮತ್ತು ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳು ಹಾಗೂ ಹಿಂಸಾಚಾರ ನಡೆಸಲು ಈ ಆರೋಪಿಗಳು ಸಂಚು ರೂಪಿಸಿದ್ದರು. ಬಿ ಟೆಕ್ ಪದವೀಧರರಾಗಿರುವ ಈ ಇಬ್ಬರು ಆರೋಪಿಗಳು ಆಗಸ್ಟ್ 15 2022 ರಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದಿದ್ದರು. ಇದಲ್ಲದೆ ಗೋದಾಮುಗಳು, ಮದ್ಯದ ಮಳಿಗೆಗಳು, ಹಾರ್ಡ್‌ವೇರ್ ಅಂಗಡಿಗಳು, ವಾಹನಗಳು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳ ಹಾನಿಗೆ ಸಂಚು ರೂಪಿಸಿದ್ದರು.

ವಾರಾಹಿ ನದಿ ದಡದಲ್ಲಿ ಐಇಡಿ ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಈ ವೇಳೆ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟು ಹಾಕಿದ್ದರು. ಮಾತ್ರವಲ್ಲ ಧ್ವಜ ಸುಟ್ಟು ವೀಡಿಯೋ ರೆಕಾರ್ಡ್ ಮಾಡಿದ್ದರು. ತನಿಖೆ ವೇಳೆ ವಿದೇಶಿ ಹ್ಯಾಂಡ್ಲರ್ ಗಳಿಂದ ಕ್ರಿಪ್ಟೋ ಕರೆನ್ಸಿ ರೂಪದಲ್ಲಿ ಹಣ ಪಡೆದಿರುವುದು ಪತ್ತೆಯಾಗಿತ್ತು. ತನ್ನ ಸ್ನೇಹಿತರ ಖಾತೆಗಳಿಗೆ 1.5 ಲಕ್ಷ ಕ್ರಿಪ್ಟೋ ಕರೆನ್ಸಿ ಪಡೆದಿದ್ದ ಮಾಜ್. ಸೈಯದ್ ಯಾಸಿನ್ ಸ್ನೇಹಿತನ ಖಾತೆಗೆ 62 ಸಾವಿರ ಹಣ ಜಮೆ‌ಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಶಾರಿಕ್ ಬಾಂಬ್‌ ಬ್ಲಾಸ್ಟ್ ಗೆ ಪ್ಲಾನ್ ಮಾಡಿದ್ದ. ನವೆಂಬರ್ 19, 2022 ರಂದು ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಐಇಡಿ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ, ದಾರಿ ಮಧ್ಯೆ ಟೈಮರ್ ಅಸಮರ್ಪಕ ಕಾರ್ಯದಿಂದ ಐಇಡಿ ಸ್ಪೋಟಗೊಂಡಿತ್ತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

3 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

6 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

18 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

20 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

20 hours ago